ಚೀನಾದ ಜೊತೆಗೆ ಲಡಾಕ್ ಗಡಿಭಾಗದಲ್ಲಿ ತಲೆದೋರಿದ ಬಿಕ್ಕಟ್ಟನ್ನು ದ್ವಿಪಕ್ಷೀಯ ಮಾತಕತೆ ಮೂಲಕ ಶಾಂತಿಯುತ ರೀತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಉಭಯ ದೇಶಗಳ ಮಿಲಿಟರಿ ಮಟ್ಟದ ಸಂಧಾನ ಸಭೆ ತೀರ್ಮಾನಿಸಿದೆ. ಒಂದು ತಿಂಗಳಿಂದ ಎರಡು ರಾಷ್ಟ್ರಗಳ ನಡುವೆ ಉದ್ಭವಿಸಿರುವ ಸಂಘರ್ಷ ಸ್ಥಿತಿ ಶಮನಕ್ಕಾಗಿ ಶನಿವಾರ ಎರಡೂ ದೇಶಗಳ ಉನ್ನತ ಸೇನಾಧಿಕಾರಿಗಳ ಸಭೆ ನಡೆದಿದ್ದು, ಅದರಲ್ಲಿ ಈ ನಿರ್ಧಾರವಾಗಿದೆ. ಇದೇ ವೇಳೆಗೆ ‘‘ಸಂಘರ್ಷದಿಂದ ಸಮಸ್ಯೆ ಇತ್ಯರ್ಥಗೊಳ್ಳುವುದಿಲ್ಲ. ಇದನ್ನು ಚೀನಾ ಅರ್ಥ ಮಾಡಿಕೊಳ್ಳಬೇಕು. ಅನಗತ್ಯ ಹಸ್ತಕ್ಷೇಪ ಹಾಗೂ ಶಕ್ತಿಪ್ರದರ್ಶನಕ್ಕೆ ಮುಂದಾದರೆ ನಾವು ಕೈಕಟ್ಟಿ ಕೂಡುವುದಿಲ್ಲ,’’ […]