ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿರುವ ‘ಲಾಕ್ಡೌನ್’ ನಿಂದಾಗಿ ಆರ್ಥಿಕ ಚಟುವಟಿಕೆಗಳೆಲ್ಲವೂ ಸ್ಥಗಿತವಾಗಿವೆ. ಪರಿಣಾಮ ಸರಕಾರದ ಬೊಕ್ಕಸವೂ ಬರಿದಾಗುತ್ತಿದೆ. ಇದು ಅನಿರೀಕ್ಷಿತವೇನಲ್ಲ. ಆದರೆ, ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳು ಯಾವ ರೀತಿ ಪರಿಣಾಮ ಬೀರಲಿವೆ ಎಂಬುದರ ಬಗ್ಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ. ಖಜಾನೆ ಖಾಲಿಯಾಗುತ್ತಿದೆ ಎಂದು ಹೇಳುತ್ತ ಕೂರುವುದರಲ್ಲೂ ಯಾವುದೇ ಅರ್ಥವಿಲ್ಲ. ದೀರ್ಘಕಾಲೀನ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತ ನಿರ್ಧಾರಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೈಗೊಳ್ಳಬೇಕು ಮತ್ತು ಅವುಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜನರ […]