ವಿಕ ಸುದ್ದಿಲೋಕ ಬೆಂಗಳೂರು. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲದಿರುವುದು ಮತ್ತು ಆ್ಯಂಬುಲೆನ್ಸ್‌ಗಳಿಲ್ಲದೆ ರೋಗಿಗಳು ಪರದಾಡುತ್ತಿರುವ ದೂರುಗಳು ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಕೋವಿಡ್ ನಿರ್ವಹಣಾ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳನ್ನು ತಂದಿದೆ. ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಟಿ ಬೀಸಿದ್ದರು. ಹೀಗಾಗಿ, ಸೋಂಕಿತರ ಚಿಕಿತ್ಸೆಗೆ ಹಾಸಿಗೆ ವ್ಯವಸ್ಥೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲು ಅಗತ್ಯವಿರುವ ಆ್ಯಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ. ಮೃತಪಟ್ಟ ಸೋಂಕಿತರನ್ನು ಚಿತಾಗಾರಗಳಿಗೆ ಸಾಗಿಸಲು ವಾಹನಗಳನ್ನು ನಿಯೋಜಿಸಲಾಗಿದೆ. ನಗರದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ […]