ಬಹುನಿರೀಕ್ಷಿತ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹಿಮಾಚಲದಲ್ಲಿ ಗರಿಷ್ಠ ಸ್ಥಾನ ಗಳಿಸಿ, ಗುಜರಾತಿನಲ್ಲಿ ಪ್ರಯಾಸ ಪಟ್ಟು ಬಿಜೆಪಿ ಅಧಿಕಾರವನ್ನು ಹಿಡಿದಿದೆ. ಇಲ್ಲಿ ಆರಂಭವಾಗುವ ಮೊದಲ ಲೆಕ್ಕಾಚಾರ ಈ ಜಿದ್ದಾಜಿದ್ದಿನಲ್ಲಿ ಗೆದ್ದವರು ಯಾರು? ಸೋತವರು ಯಾರು? ಎಂಬುದು. ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನಗಳನ್ನು ಗೆದ್ದು ಸಂಖ್ಯಾಬಲ ಹೆಚ್ಚಿಸಿಕೊಂಡಿರುವುದು ನಿಜ. ಆದರೂ ಶತಾಯಗತಾಯ ಅಧಿಕಾರ ಹಿಡಿಯುವ ಮಹತ್ವಾಕಾಂಕ್ಷೆಯೊಂದಿಗೆ ತನ್ನೆಲ್ಲ ಪ್ರತಿಷ್ಠೆಯನ್ನು ಪಣಕ್ಕಿಟ್ಟು, ತರಹೇವಾರಿ ಹೊಂದಾಣಿಕೆಗಳನ್ನು ಮಾಡಿಕೊಂಡು ಸೆಣೆಸಿದರೂ ಅಧಿಕಾರದ ಕನಸು ಕೈಗೂಡಲಿಲ್ಲ ಎಂಬುದೂ […]