– ಕೋವಿಡ್ ಆತಂಕದ ನಡುವೆಯೂ ಶೇ.90ರಷ್ಟು ವಿದ್ಯಾರ್ಥಿಗಳು ಹಾಜರು. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19ನಿಂದಾಗಿ ತೀವ್ರ ಆತಂಕದೊಂದಿಗೆ ಜೂ.25ರಿಂದ ಆರಂಭವಾಗಿದ್ದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಪೂರ್ಣಗೊಂಡಿತು. ಶುಕ್ರವಾರ ನಡೆದ ತೃತೀಯ ಭಾಷಾ ವಿಷಯಗಳ ಪರೀಕ್ಷೆಗೆ ಶೇ.98.10ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ‘‘ಕೊರೊನಾ ವೈರಸ್ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳಲ್ಲಿ ಅಲ್ಲಿನ ಸರಕಾರಗಳು ಪರೀಕ್ಷೆ ಮುಂದೂಡಿವೆ. ಆದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ನಾವು ನಡೆಸಿದ ಪ್ರಯತ್ನ […]
Read More
ಕೊರೊನಾ ಒಡ್ಡಿದ ಅಗ್ನಿಪರೀಕ್ಷೆಯನ್ನು ಯಶಸ್ವಿಯಾಗಿ ದಾಟಲಾಗುತ್ತಿದೆ. ರಾಜ್ಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸರಕಾರಿ ಯಂತ್ರಾಂಗದ ಕಾಳಜಿ, ಯೋಜನಾಬದ್ಧತೆ, ಕಾರ್ಯ ಸಮನ್ವಯದಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಮೊದಲನೇ ದಿನ ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ‘ಕೋವಿಡ್ ಸಂಹಿತೆ’ಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಭಯದ ವಾತಾವರಣವಿರಲಿಲ್ಲ. ಸಣ್ಣ ಪುಟ್ಟ ಗೊಂದಲಗಳು, ಒಂದೆರಡು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ವ್ಯವಸ್ಥೆ ಹಳಿ ತಪ್ಪಿಲ್ಲ. ರಾಜ್ಯ ವ್ಯಾಪಿ ನೋಟ ಇಲ್ಲಿದೆ. ವಿಕ ಬ್ಯೂರೊ ಬೆಂಗಳೂರು ಕೋವಿಡ್-19 ಆತಂಕದ ನಡುವೆ ರಾಜ್ಯಾದ್ಯಂತ […]
Read More
ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಆತಂಕದ ನಡುವೆ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ ಪರೀಕ್ಷೆಗಳು ಗುರುವಾರ ಯಶಸ್ವಿಯಾಗಿ ನಡೆದಿದ್ದು, ಶೇ.98.3ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ, ಪೊಲೀಸರು, ಶಿಕ್ಷಕರು, ಪೋಷಕರು ಮತ್ತು ಸಾರ್ವಜನಿಕರು ಎಲ್ಲರೂ ಸೇರಿ ದೇಶಾದ್ಯಂತ ಕುತೂಹಲ ಕೆರಳಿಸಿದ್ದ, ವ್ಯಾಪಕ ಚರ್ಚೆಗೆ ಗುರಿಯಾಗಿದ್ದ ಪರೀಕ್ಷೆಯನ್ನು ಯಾವುದೇ ದೊಡ್ಡ ಸಮಸ್ಯೆಗಳಿಲ್ಲದೆ ನಡೆಸುವಲ್ಲಿ ಯಶಸ್ವಿಯಾದರು. ರಾಜ್ಯಾದ್ಯಂತ ಒಟ್ಟು 2879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು. […]
Read More
ವಿಕ ಸುಕದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಗುರುವಾರದಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಪರೀಕ್ಷೆಯ ಸುರಕ್ಷತೆ ವಿಚಾರವಾಗಿ ಮೊದಲಿದ್ದ ಆತಂಕ ದೂರವಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಎದುರಿಸಲು ಸಜ್ಜಾಗಿರುವುದು ಎಲ್ಲೆಡೆ ಕಂಡು ಬಂದಿದೆ. ಪೋಷಕರು, ಶಿಕ್ಷಕರು, ಗಣ್ಯರು ಹಾಗೂ ಊರಿನ ಜನರು ವಿದ್ಯಾರ್ಥಿಗಳ ಬೆನ್ನಿಗೆ ನಿಂತು ನಿರ್ಭಯವಾಗಿ ಪರೀಕ್ಷೆ ಬರೆಯುವಂತೆ ಪ್ರೇರೇಪಿಸುತ್ತಿದ್ದಾರೆ. ಎಲ್ಲೆಡೆ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸೇಷನ್ ಸೇರದಂತೆ ಸಕಲ ಸುರಕ್ಷತಾ ಕ್ರಮಗಳೊಂದಿಗೆ ಸಿದ್ಧತೆಗಳನ್ನು ನಡೆಸಲಾಗಿದೆ. ಕೆಲವೆಡೆ ಶಾಲೆಗಳು ತಳಿರು-ತೋರಣಗಳಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಲು […]
Read More
ಶೈಕ್ಷಣಿಕ ಜೀವನದ ಅತಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಕಟ್ಟೆಚ್ಚರದ ನಡುವೆ ಆರಂಭಗೊಳ್ಳಲಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈ ವಾತಾವರಣದಲ್ಲಿ ಒಂದು ಬಗೆಯ ಉದ್ವಿಗ್ನತೆ ನಿರ್ಮಿಸುತ್ತವೆ. ಈಗಂತೂ ಕೊರೊನಾ ಕಾಲಘಟ್ಟದಲ್ಲಿ ಅದು ನಡೆಯುತ್ತಿರುವುದರಿಂದ, ಅದಕ್ಕೆ ಇನ್ನಷ್ಟು ಆತಂಕದ ಅವರಣ ನಿರ್ಮಾಣವಾಗಿದೆ. ಜೂನ್ 25ರಂದು ಪರೀಕ್ಷೆ ನಡೆಯಲಿ ಎಂದು ಸರಕಾರ ಹಾಗೂ ತಜ್ಞರು ತೀರ್ಮಾನಿಸುವಾಗ, ಕೊರೊನಾ ಕೇಸುಗಳು ಇಷ್ಟೊಂದು ಪ್ರಮಾಣದಲ್ಲಿ ವೃದ್ಧಿಯಾಗುತ್ತವೆ ಎಂಬ ನಿರೀಕ್ಷೆಯಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಸೋಂಕು ಹಾಗೂ ಮರಣ ಪ್ರಮಾಣ […]
Read More
– ರಾಜ್ಯಾದ್ಯಂತ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ | ಕೊರೊನಾ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಜೂ.25ರಿಂದ ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ಸಜ್ಜುಗೊಳಿಸಲಾಗಿದೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರಕಾರ ಅಭಯ ನೀಡಿದೆ. ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿಯನ್ನು ಸರಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ. […]
Read More
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್‌ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್, ಕಂಟೈನ್ಮೆಂಟ್ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]
Read More
– ಎಲ್‌ಕೆಜಿಯಿಂದ 5ನೇ ತರಗತಿವರೆಗಿನ ಆನ್‌ಲೈನ್ ಪಾಠಕ್ಕೆ ಸರಕಾರ ತಡೆ – ಆನ್‌ಲೈನ್ ಹೆಸರಲ್ಲಿ ಶುಲ್ಕ ಪಡೆದರೆ ಕ್ರಮ | ಶೈಕ್ಷಣಿಕ ಶುಲ್ಕ ಹೆಚ್ಚಳವೂ ಬೇಡ ವಿಕ ಸುದ್ದಿಲೋಕ, ಬೆಂಗಳೂರು. ಎಲ್‌ಕೆಜಿ-ಯುಕೆಜಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ‘ಆನ್‌ಲೈನ್ ತರಗತಿ’ ನಡೆಸಬಾರದು ಎಂದು ಸರಕಾರ ಆದೇಶಿಸಿದೆ ಮತ್ತು ಈಗ ಖಾಸಗಿ ಶಾಲೆಗಳು ನಡೆಸುತ್ತಿರುವ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಿದೆ. ನಗರದ ಸಮಗ್ರ ಶಿಕ್ಷಣ ಅಭಿಯಾನದ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ […]
Read More
ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್‌ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]
Read More
– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]
Read More