ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೂನ್ 25ರಿಂದ ಆರಂಭವಾಗಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು ಸೇರಿದಂತೆ ಕೊರೊನಾ ಸೋಂಕು ತಡೆಯಲು ಬೇಕಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಸಾರಿಗೆ, ಹಾಸ್ಟೆಲ್, ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. […]
Read More
– 8ರಿಂದ 10ನೇ ಕ್ಲಾಸ್ಗೆ ಅಂತರ್ಜಾಲ ಶಿಕ್ಷಣ ಓಕೆ ಎಂಬ ಅಭಿಮತ – ಖಾಸಗಿಯಂತೆ ಸರಕಾರಿ ಶಾಲೆ ಮಕ್ಕಳಿಗೂ ಸಿಗಲಿ ಆನ್ಲೈನ್ ಶಿಕ್ಷಣ. – ವಿಕ ಫೋಕಸ್. ಜಯಂತ್ ಗಂಗವಾಡಿ, ಬೆಂಗಳೂರು. ಎಲ್ಕೆಜಿಯಿಂದ 5ನೇ ತರಗತಿವರೆಗೆ ಆನ್ಲೈನ್ ಶಿಕ್ಷಣ ನೀಡುವುದಕ್ಕೆ ಸರಕಾರ ನಿರ್ಬಂಧ ವಿಧಿಸಿರುವ ಬಗ್ಗೆ ಸಾರ್ವತ್ರಿಕ ಬೆಂಬಲ ವ್ಯಕ್ತವಾಗಿರುವ ನಡುವೆಯೇ, ಎಂಟರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ಮಾದರಿಯಲ್ಲಿ ಶಿಕ್ಷಣ ನೀಡಲು ತಕ್ಷಣ ವ್ಯವಸ್ಥೆ ರೂಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಈ ಶಿಕ್ಷಣ ಕೇವಲ ಖಾಸಗಿ […]
Read More
ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]
Read More
– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]
Read More
– ಎಸ್ಸೆಸ್ಸೆಲ್ಸಿ ಎಕ್ಸಾಂ ರದ್ದತಿ, ಮಂದೂಡಿಕೆ ಬೇಡ: ತಜ್ಞರ ಅಭಿಮತ – ಸೆಂಟರ್ಗೆ ಹೋಗುವ ಬದಲು ಸ್ಕೂಲಲ್ಲೇ ಬರೆಸುವುದು ಸೂಕ್ತ. ವಿಕ ಸುದ್ದಿಲೋಕ ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಕೇ ಬೇಡವೇ ಎಂಬ ಚರ್ಚೆ ಜೋರಾಗಿರುವ ನಡುವೆಯೇ, ವಿದ್ಯಾರ್ಥಿಗಳಿಗೆ ಅವರು ಕಲಿತ ಶಾಲೆಯಲ್ಲೇ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆ ನಡೆಸಿದರೆ ಯಾವುದೇ ಸಮಸ್ಯೆ ಇಲ್ಲ ಎಂಬ ‘ಮಧ್ಯಮ ಸಲಹೆ’ಯೊಂದು ಕೇಳಿಬಂದಿದ್ದು, ಇದನ್ನು ಶಿಕ್ಷಣ ವಲಯವೂ ಬೆಂಬಲಿಸಿದೆ. ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸುವುದು ಸಮಂಜಸವಲ್ಲ […]
Read More
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು, ನಡೆಸಬೇಕೋ ಬೇಡವೋ, ನಡೆಸಿದರೆ ಹೇಗೆ, ನಡೆಸದಿದ್ದರೆ ಏನು ತೊಂದರೆ ಮುಂತಾದ ಚರ್ಚೆಗಳು ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿವೆ. ಜೂನ್ 25ರಿಂದ ಜುಲೈ 4ರವರೆಗೆ ಸರಕಾರ ಪರೀಕ್ಷೆ ನಿಗದಿಪಡಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಾಗ ಪರೀಕ್ಷೆಯ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವುದು ಅವರನ್ನು ಕೊರೊನಾ ಆತಂಕಕ್ಕೆ ತಳ್ಳಿದಂತಾಗಬಹುದು ಮತ್ತು ಒತ್ತಡ ಸೃಷ್ಟಿಗೆ ಕಾರಣವಾಗಬಹುದು. ಇದರಿಂದ ಅವರು ಪರೀಕ್ಷೆಯನ್ನೂ ಸರಿಯಾಗಿ ಬರೆಯಲಾಗದೆ ಹೋಗಬಹುದು ಎಂಬ ವಾದದಲ್ಲಿ ಭಾಗಶಃ ಸತ್ಯವಿದೆ. […]
Read More