ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿರುವ ‘ಲಾಕ್ಡೌನ್’ ನಿಂದಾಗಿ ಆರ್ಥಿಕ ಚಟುವಟಿಕೆಗಳೆಲ್ಲವೂ ಸ್ಥಗಿತವಾಗಿವೆ. ಪರಿಣಾಮ ಸರಕಾರದ ಬೊಕ್ಕಸವೂ ಬರಿದಾಗುತ್ತಿದೆ. ಇದು ಅನಿರೀಕ್ಷಿತವೇನಲ್ಲ. ಆದರೆ, ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳು ಯಾವ ರೀತಿ ಪರಿಣಾಮ ಬೀರಲಿವೆ ಎಂಬುದರ ಬಗ್ಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ. ಖಜಾನೆ ಖಾಲಿಯಾಗುತ್ತಿದೆ ಎಂದು ಹೇಳುತ್ತ ಕೂರುವುದರಲ್ಲೂ ಯಾವುದೇ ಅರ್ಥವಿಲ್ಲ. ದೀರ್ಘಕಾಲೀನ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತ ನಿರ್ಧಾರಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೈಗೊಳ್ಳಬೇಕು ಮತ್ತು ಅವುಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜನರ […]
Read More
ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]
Read More
ವೆಚ್ಚ ಕಡಿತದ ಪ್ರಸ್ತಾವನೆ ಓಕೆ, ನಿಗಮ, ಮಂಡಳಿ ನೇಮಕ ಬೇಕೆ? ಕೊರೊನಾ ಮಹಾಮಾರಿ ದೇಶದ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮ ನಿರೀಕ್ಷೆಗೂ ಮೀರಿದ್ದು. ಆರ್ಥಿಕ ಮುಗ್ಗಟ್ಟನ್ನು ನಿಭಾಯಿಸುವ ಕ್ರಮವಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಸಚಿವರು ಹಾಗೂ ಸಂಸದರ ವೇತನವನ್ನು ಶೇ.30ರಷ್ಟು ವೇತನವನ್ನು ಒಂದು ವರ್ಷದ ಅವಧಿಗೆ ಕಡಿತ ಮಾಡುವ ತೀರ್ಮಾನವನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಇದೇ ಮಾದರಿಯಲ್ಲಿರಾಜ್ಯ ಸರಕಾರವೂ ಕ್ರಮಕ್ಕೆ ಮುಂದಾಗಿದೆ. ”ಸಚಿವರು, ಶಾಸಕರ ವೇತನವನ್ನು 2 ವರ್ಷದ ಅವಧಿಗೆ ಶೇ.30ರಷ್ಟು ಕಡಿತಗೊಳಿಸುವ ತೀರ್ಮಾನವನ್ನು ಸಂಪುಟ […]
Read More