ರಾಜ್ಯ ಮತ್ತು ಕೇಂದ್ರ ಸರಕಾರಗಳು ಪ್ರತ್ಯೇಕ ಅಸ್ತಿತ್ವ ಪಡೆದುಕೊಳ್ಳಲಿ ಎಂಬ ಕಾರಣಕ್ಕೆ ಭಾರತವು ‘ಒಕ್ಕೂಟ ವ್ಯವಸ್ಥೆ’ಯನ್ನು ಅನುಸರಿಸುತ್ತಿದೆ. ರಕ್ಷಣೆ, ಸಂವಹನ, ವಿದೇಶಾಂಗ ವ್ಯವಹಾರದಂಥ ಪ್ರಮುಖ ವಲಯಗಳನ್ನು ಹೊರತುಪಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಮ್ಮದೇ ಅಧಿಕಾರ ವ್ಯಾಪ್ತಿಯನ್ನು ಹೊಂದಿವೆ. ಸಂವಿಧಾನವೂ ಅಧಿಕಾರ ಹಂಚಿಕೆ ಸಂಬಂಧ ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ಸ್ಪಷ್ಟ ಗೆರೆ ಎಳೆದಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಆ ಗೆರೆ ಮಸುಕಾಗುತ್ತಿದೆ. ಕೊರೊನಾ ಸಂಕಟದ ಸಮಯದಲ್ಲಿಅದು ಇನ್ನಷ್ಟು ಬಹಿರಂಗವಾಗುತ್ತಿದೆ. ಕೊರೊನಾ ಮಹಾಮಾರಿಯಿಂದಾಗಿ ಎಲ್ಲ ರಾಜ್ಯಗಳ ಆರ್ಥಿಕ […]