
ಹೊಸದಿಲ್ಲಿ: ಬಡ ಕುಟುಂಬಗಳ ಆರೋಗ್ಯ ರಕ್ಷಣೆಯ ಮಹಾತ್ವಾಕಾಂಕ್ಷೆಯೊಂದಿಗೆ 2018ರಲ್ಲಿಶುರುವಾದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 1 ಕೋಟಿಯ ಮೈಲುಗಲ್ಲುದಾಟಿದೆ. 53 ಕೋಟಿ ಜನರು ಆಯುಷ್ಮಾನ್ ಕಾರ್ಡ್ ಪಡೆದುಕೊಂಡಿದ್ದಾರೆ. ದೇಶದ 21,565 ಆಸ್ಪತ್ರೆಗಳಲ್ಲಿಈ ಯೋಜನೆಯಡಿ ಉಚಿತ ಆರೋಗ್ಯ ಸೇವೆ ಪಡೆದ ಫಲಾನುಭವಿಗಳ ಸಂಖ್ಯೆ ಒಂದು ಕೋಟಿ ದಾಟುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯವನ್ನು ಟ್ವಿಟರ್ ಮೂಲಕ ಪ್ರಕಟಿಸಿ ಜನರ ಆರೋಗ್ಯ ರಕ್ಷಣೆ ಬಗ್ಗೆ ಸರಕಾರಕ್ಕಿರುವ ಆದ್ಯತೆಯನ್ನು ಇದು ತೋರಿಸುತ್ತದೆ […]