
ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ತಾನದ ಕ್ರಮಕ್ಕೆ ಭಾರತ ತೀವ್ರ ವಿರೋಧ ಒಡ್ಡಿದೆ. ಆಕ್ರಮಿತ ಪ್ರದೇಶವನ್ನು ತಕ್ಷಣವೇ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಭಾರತ ಇಷ್ಟು ನೇರ ಸಂದೇಶ ನೀಡಿರುವುದು ಇದೇ ಮೊದಲು. ಇತ್ತೀಚೆಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಒಂದು ತೀರ್ಪು ನೀಡಿ, ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬಹುದು ಎಂದು 2018ರಲ್ಲಿ ಸರಕಾರ ಮಾಡಿದ್ದ ಸಂವಿಧಾನ ತಿದ್ದುಪಡಿಯನ್ನು ಅನುಮೋದಿಸಿದೆ. ಇದಕ್ಕೆ ಭಾರತದ ವಿದೇಶಾಂಗ ಇಲಾಖೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗಿಲ್ಗಿಟ್ […]