
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡಚಿಂಚಲೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರು ಚಾಲಕನನ್ನು ಸಾಮೂಹಿಕವಾಗಿ ಥಳಿಸಿ, ಭೀಕರವಾಗಿ ಕೊಲೆ ಮಾಡಿದ ಘಟನೆ ಮತ್ತೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಘಟನೆ ಸಂಬಂಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆದರೆ, ಮಹಾರಾಷ್ಟ್ರದಲ್ಲಿ […]