
ಅಮೆರಿಕ ಹಾಗೂ ಚೀನಾಗಳು ಸದ್ದಿಲ್ಲದೆ ಕಿಲ್ಲರ್ ರೋಬಾಟ್‌ಗಳನ್ನು ತಯಾರಿಸುತ್ತಿವೆ ಎಂಬ ಗುಸುಗುಸು ಮಿಲಿಟರಿ ವಲಯದಲ್ಲೇ ಇದೆ. ಇವುಗಳನ್ನು ನಿಷೇಧಿಸಬೇಕು ಎಂಬ ಕೂಗು ಎದ್ದಿದೆ. ಏನಿದು ಕೊಲೆಗಾರ ಯಂತ್ರ? ಅವುಗಳಿಂದ ಏನು ಅಪಾಯ? ಯುದ್ಧರಂಗದಲ್ಲಿ ಮಾನವರಿಲ್ಲದೆ ಬರೀ ಯಂತ್ರಗಳು ಹೊಡೆದಾಡುವುದನ್ನು ಕಲ್ಪಿಸಿಕೊಳ್ಳಿ. ಅಥವಾ ಮುಂದುವರಿದ ದೇಶವೊಂದರ ದೈತ್ಯ ರೋಬಾಟ್‌ಗಳು ಪಕ್ಕದ ಬಲಹೀನ ದೇಶದ ಗಡಿಯೊಳಗೆ ನುಗ್ಗಿ ಸೈನಿಕರನ್ನು ಹುಳಗಳಂತೆ ಜಜ್ಜಿಹಾಕುವುದನ್ನು ಕಲ್ಪಿಸಿಕೊಳ್ಳಿ. ಅಥವಾ ಇದ್ದಕ್ಕಿದ್ದಂತೆ ಆಕಾಶದಿಂದ ಸಾವಿರಾರು ಡ್ರೋನ್‌ಗಳು ಇದ್ದಕ್ಕಿದ್ದಂತೆ ಬೆಂಕಿಯ ಮಳೆ ಸುರಿಸುವುದನ್ನು ಊಹಿಸಿಕೊಳ್ಳಿ. ಮಿಲಿಟರಿಯಲ್ಲಿ ಕೊಲೆಗಾರ […]