
ಬೆಂಗಳೂರು: ಕೊರೊನಾ ಸಂಕಷ್ಟದಿಂದ ಜನಜೀವನ ಪುಟಿದೇಳಲೇಬೇಕು. ರಾಜ್ಯದಲ್ಲಿ ತಕ್ಷಣಕ್ಕೆ ಚೇತರಿಕೆ ಕಾಣಬಲ್ಲ ಕ್ಷೇತ್ರಗಳಲ್ಲಿ ಒಂದಾದ ರಿಯಾಲ್ಟಿ ಕ್ಷೇತ್ರದ ಪುನಶ್ಚೇತನಕ್ಕೆ ಸರ್ವ ನೆರವು ನೀಡಲು ಸರಕಾರ ಬದ್ಧವಾಗಿದೆ. ಈಗಾಗಲೇ ಹಲವು ಕ್ರಮಗಳನ್ನು ಪ್ರಕಟಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳು ಜಾರಿಯಾಗಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ವಿಜಯ ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ‘ಕರುನಾಡ ಕಟ್ಟೋಣ ಬನ್ನಿ’ ಅಭಿಯಾನದಡಿ ನಡೆದ ‘ರಿಯಾಲ್ಟಿ ಕ್ಷೇತ್ರದ ಪುನಶ್ಚೇತನ: ಚಿಂತನ ಮಂಥನ’ ಡಿಜಿಟಲ್ ಸಂವಾದದಲ್ಲಿ ಮಾತನಾಡಿದರು. ಬೆಂಗಳೂರಿನ ಕ್ರೆಡೈ […]