
ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]