ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಹಿನ್ನೆಲೆಯಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಚಿಂತಿತರಾಗಿದ್ದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಯಾನಂದ ಸಾಗರ್ ವಿಶ್ವವಿದ್ಯಾಲಯ ಸಿಇಟಿ, ನೀಟ್ ಮತ್ತು ಡಿಎಸ್ಎಟಿಗೆ ಸಿದ್ಧತೆ ಮಾಡಿಕೊಳ್ಳಲು ಉಚಿತ ಆನ್‌ಲೈನ್ ತರಗತಿಗಳನ್ನು ‘ವಿಜಯ ಕರ್ನಾಟಕ’ ಸಹಯೋಗದಲ್ಲಿ ಪ್ರಾರಂಭಿಸಿದೆ. ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆನ್‌ಲೈನ್ ತರಗತಿಗಳಿಗೆ ಚಾಲನೆ ನೀಡಿದರು. ‘‘ಕೊರೊನಾ ವೈರಸ್ ಸೋಂಕಿನ ಭೀತಿಯಿಂದ ತರಬೇತಿ […]