
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್‌ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್, ಕಂಟೈನ್ಮೆಂಟ್ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]