
ವೈವಿಧ್ಯತೆಯನ್ನು ಕಾಯ್ದುಕೊಳ್ಳುವ, ಪರಸ್ಪರರನ್ನು ಗೌರವಿಸುವ ಸಹಜ ಆಶಯಕ್ಕೆ ಮತಾಂತರ ದೊಡ್ಡ ಹೊಡೆತ. ರೋಮನ್ನರು ಜೆರುಸಲೇಂ ಮೇಲೆ ಆಕ್ರಮಣ ನಡೆಸಿ, ಹತ್ಯಾಕಾಂಡಕ್ಕೆ ಇಳಿದಾಗ ಯಹೂದಿಗಳು ತಮ್ಮ ಪ್ರಾಣ ಉಳಿಸಿಕೊಳ್ಳಲು ತಾವಿದ್ದ ನೆಲವನ್ನು ತೊರೆಯಲೇಬೇಕಿತ್ತು. ಅನಿವಾರ್ಯವಾಗಿ ಗುಂಪು ಗುಂಪಾಗಿ ದೇಶಾಂತರ ಹೊರಟರು. ಆಗ ಯಹೂದಿಗಳ ಒಂದು ತಂಡ ಭಾರತದ ಕೇರಳವನ್ನು ಅರಸಿ ಬಂತು. ಆ ವೇಳೆಗಾಗಲೇ, ಯಹೂದಿಗಳು ಕೇರಳದ ಜತೆ ಅನೇಕ ವರ್ಷಗಳಿಂದ ಸಮುದ್ರ ಮಾರ್ಗದ ಮೂಲಕ ವ್ಯಾಪಾರ-ವ್ಯವಹಾರದ ಸಂಬಂಧ ಹೊಂದಿದ್ದರು. ಹಾಗಾಗಿ ಭಾರತದಲ್ಲಿ ಆಸರೆ ಸಿಗಬಹುದು, […]