
ಕಳೆದ ವರ್ಷ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಬಂದ ಮಾಸದಲ್ಲೇ ಈ ವರ್ಷವೂ ಅದು ಮರುಕಳಿಸುತ್ತಿದೆ. ಹಾಗೆಯೇ ಎರಡು ವರ್ಷಗಳ ಹಿಂದೆ ಕೊಡಗಿನಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿ ಹಲವು ಮಂದಿಯನ್ನು ಬಲಿ ತೆಗೆದುಕೊಂಡು ನೂರಾರು ಮಂದಿಯನ್ನು ನಿರಾಶ್ರಿತರನ್ನಾಗಿಸಿತ್ತು. ನಿನ್ನೆ ತಲಕಾವೇರಿಯಲ್ಲಿ ಅಂಥದೇ ಇನ್ನೊಂದು ದುರಂತ ಸಂಭವಿಸಿದ್ದು, ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ಇದೆ. ಭಾರಿ ಮಳೆ ಸುರಿಯುತ್ತಲೇ ಇರುವುದರಿಂದ ದುರಂತಗಳ ಸಂಖ್ಯೆ ನಾವು ಬೇಡವೆಂದರೂ ಹೆಚ್ಚಾಗಬಹುದು; ಮುನ್ನೆಚ್ಚರಿಕೆ ಹಾಗೂ ತಕ್ಷಣದ ರಕ್ಷಣಾ ಕಾರ್ಯಾಚರಣೆಗಳು ಈಗ […]