
ಉತ್ತರ ಭಾರತದ ನಾನಾ ಮೆಟ್ರೋ ನಗರಗಳಿಂದ ಹಳ್ಳಿಗಳ ಕಡೆಗೆ ದೊಡ್ಡ ಪ್ರಮಾಣದ ಮರು ವಲಸೆ ಆರಂಭವಾಗಿದೆ. ದಿನದ ಕೂಳು ಸಂಪಾದಿಸಲೆಂದು ನಗರಗಳಿಗೆ ಬಂದು ಕೂಲಿ ಮಾಡಿ ಹೊಟ್ಟೆಪಾಡು ನೋಡಿಕೊಳ್ಳುತ್ತಿದ್ದವರು, ನಾನಾ ಬಗೆಯಲ್ಲಿ ದಿನದ ಸಂಪಾದನೆಯನ್ನೇ ನೆಚ್ಚಿಕೊಂಡು ಇದ್ದವರು ಈಗ ಲಾಕ್ಡೌನ್ ಪರಿಣಾಮ ಸಂಪಾದನೆಗೆ ದಾರಿ ಕಾಣದೆ, ತಮ್ಮ ಹಳ್ಳಿಗಳ ದಾರಿ ಹಿಡಿದಿದ್ದಾರೆ. ರೈಲ್ವೆ ಸೇರಿದಂತೆ ಸಾರಿಗೆ ಸಂಪರ್ಕಗಳನ್ನು ರದ್ದುಪಡಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿರುವ ಈ ಕಾರ್ಮಿಕರು ನಡೆದೇ ಹೊರಟಿದ್ದಾರೆ. ಇಂಥದೊಂದು ಅಡ್ಡ ಪರಿಣಾಮವನ್ನು ಊಹಿಸಿರದ ಸರಕಾರ ಥಟ್ಟನೆ ಎಚ್ಚೆತ್ತುಕೊಂಡು […]